ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಆರಂಭವಾದ ಈ ದಾಳಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಬಗ್ಗೆ ಬಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ದಿವಂಗತ ದೊರೆಸ್ವಾಮಿ ನಾಯ್ಡು ಸ್ಥಾಪಿಸಿದ್ದ ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು, ಹನುಮಂತನಗರ ಕಾಲೇಜು, ಆಂಧ್ರದ ಕುಪ್ಪಂ ಕಾಲೇಜು ಸೇರಿದಂತೆ ಹಲವೆಡೆ ಐಟಿ ಶೋಧ ನಡೆದಿದೆ.
ಇದೇ ವೇಳೆ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ಅವರ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚೆನ್ನೈ, ಮಂಗಳೂರು, ಆಂಧ್ರ ಪ್ರದೇಶದಿಂದ ಬಂದಿರುವ 200ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa