ರಾಯಚೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಸೆ.24ರಂದು ಮಮದಾಪೂರ ಗ್ರಾಮದಲ್ಲಿ ಸಮುದಾಯ ಭವನ ಕಾಮಗಾರಿಗೆ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರು ಭೂಮಿಪೂಜೆಯನ್ನು ನೆರವೇರಿಸಿದರು.
ವಿಶೇಷ ಅನುದಾನದಡಿಯಲ್ಲಿ ಶ್ರೀಶಾಂಭವಿ ದೇವಿಯ ಗುಡಿ ಹತ್ತಿರ ಶೆಡ್ ನಿರ್ಮಾಣಕ್ಕೆ ಸಹ ಶಾಸಕರು ಚಾಲನೆ ನೀಡಿದರು.
ದೇವರ ದರ್ಶನ ಪಡೆದರು : ಸೆ.24ರಂದು ಗ್ರಾಮೀಣ ಪ್ರವಾಸ ಕೈಗೊಂಡ ವೇಳೆಯಲ್ಲಿ ಶಾಸಕರು, ಸುಕ್ಷೇತ್ರ ಗಧಾರ ಶ್ರೀ ಮಾರಿಕಾಂಬಾ ದೇವಿಯ ಮತ್ತು ಶ್ರೀ ಶಾಂಭವಿದೇವಿಯ ದರ್ಶನಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗಿಲ್ಲೇಸೂಗುರ ಬ್ಲಾಕ್ ಅಧ್ಯಕ್ಷರು, ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್