ರಾಷ್ಟ್ರೀಯ ಮಾದಕ ದ್ರವ್ಯಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ರಾಷ್ಟಿಟೀ
ಸಭೆ


ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ರಾಷ್ಟಿಟೀಯ ಮಾದಕ ದ್ರವ್ಯಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪಪರಿಣಾಮಗಳ ಬಗಗೆ ಅರಿವು ಮೂಡಿಸುವ ಕಾರ್ಯವಾಗಬೇಕಿದೆ. ಮಾದಕ ವಸ್ತುಗಳಿಂದ ದೂರ ಉಳಿಯುವಂತೆ ಮಾಡಲು ಕಾರ್ಯಕ್ರಮಗಳ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹಮ್ಮಿಕೊಂಡ ನಂತರ ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕುವ ಕೆಲಸವಾಗಬೇಕು. ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಅವರಲ್ಲಿಯೂ ಅರಿವು ಮೂಡಿಸುವ ಕೆಲಸವಾಗಬೇಕು. ಮಾದಕ ವಸ್ತು ಕಳ್ಳಸಾಗಣೆ ಉದ್ದೇಶಗಳಿಗಾಗಿ ಕೋರಿಯರ್ ಸೇವೆಗಳ ಸರಿಯಾದ ಮೇಲ್ವಿಚಾರಣೆ ಸಹ ಅಗತ್ಯವಾಗಿದೆ ಎಂದರು.

ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಸಿಬ್ಬಂದಿ ಆಗಾಗ್ಗೆ ಕೃಷಿ ಜಮೀನು, ತೋಟಗಳಿಗೆ ಭೇಟಿ ನೀಡಿ ಗಾಂಜಾ ಬೆಳೆಗಳನ್ನು ಬೆಳೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಖಾಸಗಿ ಪಾರ್ಸಲ್ ಸರ್ವಿಸ್‌ಗಳ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟೆ ಗೋದಾಮುಗಳನ್ನು ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ನಿರ್ಭಂದಿತ ಔಷಧಿಗಳು ಜನ ಸಾಮಾನ್ಯರಿಗೆಲ್ಲರೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಕಾಲೇಜು ವಿದ್ಯಾರ್ಥಿ ನಿಲಯಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ನಂತರ ಹಾಸ್ಟೆಲ್‌ಗಳಿಗೆ ಮರಳಿ ಬರುವ ಸಂದರ್ಭದಲ್ಲಿ ಅವರು ಯಾವುದಾದರೂ ಮಾದಕ ವಸ್ತುಗಳನ್ನು ತೆಗೆದುಕೊಂಡು ಬರುತ್ತಾರಾ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ, ಮಹಾಂತೇಶ್ವರ ಜಿದ್ದಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಜಂಟಿ ಕೃಷಿ ನಿರ್ದೇಶಕ ಲಕ್ಷö್ಮಣ ಕಳ್ಳೇನ್ನವರ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ಡಿವಾಯ್‌ಎಸ್‌ಪಿ ಗಜಾನನ ಸುತಾರ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande