ಧಾರವಾಡ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃಧ್ಧಿ ನಿಗಮದಿಂದ ಲಿಂಗತ್ವ ಅಲ್ಪಸಂಖ್ಯಾತರವರನ್ನು ಮುಖ್ಯ ವಾಹಿನಿಗೆ ತರಲು ಹಾಗೂ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಮೂಲ ಹಂತದ ಸಮೀಕ್ಷೆ
ಪ್ರಾರಂಭವಾಗಿದ್ದು ನವೆಂಬರ 21, 2025 ರವರೆಗೂ ನಡೆಯಲಿದ್ದು, ಧಾರವಾಡ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರರು ಸಮೀಕ್ಷೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa