ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಸೆಪ್ಟೆಂಬರ್ 26 ರಂದು ರೋಹು ಮತ್ತು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1.ರೂ ನಂತೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ: 9945959704, 9900776205, 08352-264516 ಹಾಗೂ 9480518679 ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande