ಶಿವಮೊಗ್ಗ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಾಡಹಬ್ಬ ಶಿವಮೊಗ್ಗ ದಸರಾ 2025 ರ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ನಾಳೆ ನಗರದ ಕುವೆಂಪು ರಂಗಮಂದಿರದಲ್ಲಿ ರೈತ ದಸರಾ ಕಾರ್ಯಕ್ರಮವನ್ನು ಆಯೇಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಬಿ.ಹೆಚ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಜಾಥ ಕಾರ್ಯಕ್ರಮವನ್ನು ಪ್ರಗತಿ ಪರ ರೈತರು ಹಾಗೂ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ಶ್ರೀಮತಿ ಕಮಲಮ್ಮ ಹಾಗೂ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಪ್ರಗತಿ ಪರ ರೈತರು ಹಾಗೂ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ಈರಪ್ಪ ನಾಯ್ಕ ಉದ್ಘಾಟನೆ ನೆರವೇರಿಸುವರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗೂ ಬೆಂಗಳೂರು ಪ್ರಾದೇಶಿಕ ವಿಭಾಗದ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಗೌರವ ಉಪಸ್ಥಿತಿರಾಗಿ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa