ರಾಯಚೂರು, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಆಸಕ್ತ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿವು ರಾಯಚೂರಿನಲ್ಲಿ 2025ರ ಅಕ್ಟೋಬರ್ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗುವುದು. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಯ ಗುಣಲಕ್ಷಣಗಳು ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಮತ್ತು ಸಾಲ ಸೌಲಭ್ಯಗಳ ಮಾಹಿತಿ ಹಾಗೂ ಸ್ವಯಂ ಉದ್ಯಮಗಳನ್ನು ಸ್ಥಾಪಿಸಲು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗಾಗಿ ಅರ್ಜಿ ಸಲ್ಲಿಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9986600631, 9986332736ಗೆ ಅಥವಾ ಸಿಡಾಕ್, ಕಚೇರಿ ನವೀನ ಆಸ್ಪತ್ರೆ ಪಕ್ಕದಲ್ಲಿ ರಾಯಚೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್