ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆ, ಬಾಗಲಕೋಟೆ ಜಿಲ್ಲೆಗೆ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ೦.೫ ಹೆ. ಹೊಸ ಮೀನು ಸಾಕಾಣಿಕಾ ತೊಟ್ಟಿಗಳ ನಿರ್ಮಾಣ ನಿರ್ಮಿಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ ೧೦ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರು, ಬಾಗಲಕೋಟೆ (೯೦೦೮೬೯೭೬೯೯), ಮೀನುಗಾರಿಕೆ ಸಹಾಯಕ ನಿರ್ದೇಶಕರು, ಬಾದಾಮಿ (೮೦೯೫೩೦೩೧೦೪) ಮತ್ತು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಜಮಖಂಡಿ (೯೮೮೬೮೨೦೭೬೧) ಅವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande