ಬಳ್ಳಾರಿ ಜಿಲ್ಲಾ ಕೈಗಾರಿಕೆಗಳು : ಸೆ. 30 ಸಭೆ, ಪ್ರತಿಭಟನಾ ನಿರತ ಭೂ ಸಂತ್ರಸ್ತರ ಆಶಾಕಿರಣ
ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಕೈಗಾರಿಕೆಗಳು ಮತ್ತು ಕಾರ್ಖಾನೆಗಳ ಕುರಿತಾದ ಸಮಸ್ಯೆಗಳ ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸೆಪ್ಟಂಬರ್ 30ರ ಮಂಗಳವಾರ ಸಂಜೆ 5 ಗಂಟೆಗೆ ಜಿಲ್ಲಾ ಜನಪ್ರತಿನಿಧಿಗಳು - ಅಧಿಕಾರಿಗಳ ಸಭ
ಬಳ್ಳಾರಿ ಜಿಲ್ಲಾ ಕೈಗಾರಿಕೆಗಳು : ಸೆಪ್ಟಂಬರ್ 30 ಸಿಎಂ ಸಭೆ : ಪ್ರತಿಭಟನಾ ನಿರತ ಭೂ ಸಂತ್ರಸ್ತರ ಆಶಾಕಿರಣ


ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಕೈಗಾರಿಕೆಗಳು ಮತ್ತು ಕಾರ್ಖಾನೆಗಳ ಕುರಿತಾದ ಸಮಸ್ಯೆಗಳ ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸೆಪ್ಟಂಬರ್ 30ರ ಮಂಗಳವಾರ ಸಂಜೆ 5 ಗಂಟೆಗೆ ಜಿಲ್ಲಾ ಜನಪ್ರತಿನಿಧಿಗಳು - ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಕಳೆದ ಒಂದು ಸಾವಿರಕ್ಕೂ ಹೆಚ್ಚಿನ ದಿನಗಳಿಂದ ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಭೂ ಸಂತ್ರಸ್ತರ ಪ್ರಮುಖ ಬೇಡಿಕೆ ಆಗಿರುವ `ಭೂ ಪರಿಹಾರ ಹೆಚ್ಚಳ' ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಹಾಗೂ ಆರ್ಸಲ್ಲಾರ್ ಲಕ್ಷ್ಮಿ ಮಿತ್ತಲ್ ಬೃಹತ್ ಕೈಗಾರಿಕಾ ಘಟಕ ಸ್ಥಾಪನೆಗಾಗಿ ಭೂ ಸ್ವಾಧೀನ ಮಾಡಿಕೊಂಡಿದ್ದ ಭೂಮಿಯನ್ನು ಜಿಂದಾಲ್ ಸಮೂಹ ಸಂಸ್ಥೆಗೆ ವರ್ಗಾವಣೆ ಮಾಡುವ ಕುರಿತು ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಅಂದಾಜಿಸಲಾಗಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು, ಜಿಂದಾಲ್, ಆರ್ಸಲ್ಲರ್ ಮಿತ್ತಲ್ ಮತ್ತು ಉತ್ತಮ್ ಗಾಲ್ವಾ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಮಾಹಿತಿ ರವಾನೆಯಾಗಿದೆ. ಅಲ್ಲದೇ, ಕುಡತಿನಿ ಮತ್ತು ಭೂ ಸಂತ್ರಸ್ತರ ಕ್ಷೇತ್ರಗಳ ವ್ಯಾಪ್ತಿಯ ಶಾಸಕರು ಹಾಗೂ ಸಂಸದರಿಗೂ ಸಭೆಯ ಮಾಹಿತಿ ರವಾನೆಯಾಗಿದೆ.

ಈ ಸಭೆಯು ಭೂ ಸಂತ್ರಸ್ತರ ಪಾಲಿಕೆ ಆಶಾಕಿರವಾಗಿದೆ ಎಂದೇ ಪರಿಗಣಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande