ಬಳ್ಳಾರಿ : ಸೆ.29 ರಂದು ಬಳ್ಳಾರಿ ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಮೊದಲ ತ್ರೆಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಸೆ.29 ರಂದು ಮಧ್ಯಾಹ್ನ 02 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ವಸ
ಬಳ್ಳಾರಿ : ಸೆ.29 ರಂದು ಬಳ್ಳಾರಿ ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ


ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಮೊದಲ ತ್ರೆಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಸೆ.29 ರಂದು ಮಧ್ಯಾಹ್ನ 02 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande