ಕೊಪ್ಪಳ : ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು
ಕೊಪ್ಪಳ : ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ : ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ : ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ : ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದ್ದಾರೆ.

ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ-2025ರ ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಎಸೆಯಭಾರದು. ಅದನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು. ಸಾರ್ವಜನಿಕರು ಕಸವನ್ನು ಬಿಸಾಕುವ ಸ್ಥಳಗಳಲ್ಲಿ ರಂಗೋಲಿ ಬಿಡಿಸುವ ಮೂಲಕ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಇಂದು ಒಂದು ದಿನ ಒಂದು ಗಂಟೆ ಸ್ವಚ್ಛತಾ ಕಾರ್ಯಕ್ರಮವನ್ನು ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯವಂತ ಸಮಾಜಕ್ಕೆ ಸ್ವಚ್ಛತೆ ಬಹಳ ಮುಖ್ಯವಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಜಿಲ್ಲೆಯ 153 ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವೆಲ್ಲರೂ ಸ್ವಚ್ಛ ಪರಿಸರಕ್ಕೆ ಒತ್ತು ನೀಡಬೇಕಿದೆ. ಇದಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ಅವರು ಮಾತನಾಡಿ, ಸ್ವಚ್ಛತೆ ನಿರಂತರ ಪ್ರಕ್ರಿಯೆ ಇವತ್ತು ಒಂದು ದಿನದ ಕೆಲಸ ಅಲ್ಲ. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಗಾಗ್ಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ವಚ್ಛತೆಯಿದ್ದರೆ ನಮಗೆ ಯಾವುದೇ ರೋಗ ರುಜಿನಿಗಳು ಬರುವುದಿಲ್ಲ ಹಾಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆಧ್ಯತೆ ನೀಡಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕ ಪ್ರಕಾಶ ವಿ. ಅವರು ಸ್ವಚ್ಛತೆಯೇ ಸೇವೆ ಪ್ರತಿಜ್ಞೆ ವಿಧಿಯನ್ನು ಎಲ್ಲರಿಗೂ ಬೋಧಿಸಿದರು. ಜಿಲ್ಲಾಡಳಿತ ಭವನದ ಕಛೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ವಚ್ಛತಾ ಕಾರ್ಯವನ್ನು ನಡೆಸಿದರು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗಮಣಿ ಹೊಸಮನಿ, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ್ ಜಿ., ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರ ಹಾಗೂ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಮತ್ತು ಪೌರ ಕಾರ್ಮಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande