ಏಕದಿನ-ಏಕ್‍ಘಂಟಾ-ಏಕ್‍ಸಾಥ್‌ನೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಡಿಸಿ ಚಾಲನೆ
ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ನಗರದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ,
ಡಿಸಿ


ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ನಗರದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ, ಎಲ್ಲರೂ ಒಟ್ಟಿಗೆ)” ಎಂಬ ಘೋಷವ್ಯಾಖ್ಯದೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹತ್ತಿರದ ಕೋಟೆಗೋಡೆ ಆವರಣದಲ್ಲಿ ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಜಿಲ್ಲೆ, ಪ್ರವಾಸೋದ್ಯಮದ ತಾಣವಾಗಿದೆ. ಐತಿಹಾಸಿಕ ಪರಂಪರೆಯನ್ನು ಹೊಂದಿರುವ ನಮ್ಮ ನಗರ. ಪಾರಂಪರಿಕ ತಾಣಗಳನ್ನು ಸಂರಕ್ಷಿಸುವುದು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛತಾ ಕಾರ್ಯ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ, ಸಾರ್ವಜನಿಕರ ಸಹಭಾಗಿತ್ವದಲ್ಲಿ ನಿರಂತರವಾಗಿ ನಡೆಯಬೇಕು. ಸಾರ್ವಜನಿಕರು ಕೋಟೆ ಗೋಡೆಯ ಅಕ್ಕಪಕ್ಕದಲ್ಲಿ ಕಸವನ್ನು ಚೆಲ್ಲದೇ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಬೇಕು. ಪಾರಂಪರಿಕ ಐತಿಹಾಸಿಕ ತಾಣಗಳ ಸೌಂದರ್ಯಕ್ಕೆ ಹಾನಿ ಉಂಟು ಮಾಡುವ ಕಾರ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ವಾರ್ಡಗಳಲ್ಲಿ ವಾರ್ಡ್ ಸದಸ್ಯರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಮಿತಿಯೊಂದನ್ನು ರಚಿಸಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಯೋಜನೆ ರೂಪಿಸಲಾಗಿದೆ.

ಜನರಲ್ಲಿ ಜಾಗೃತಿ ಮೂಡಿಸಲು ಪರಿಸರವಾದಿಗಳು, ವೃಕ್ಷೋತ್ಥಾನ ತಂಡ, ರೋಟರಿ ಕ್ಲಬ್ ಸೇರಿದಂತೆ ಸಂಘ-ಸಂಸ್ಥೆಗಳನ್ನು ಭಾಗಿದಾರರನ್ನಾಗಿಸಿಕೊಂಡು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಸ್ವಚ್ಛ-ಸುಂದರ ನಗರ ಹಾಗೂ ಸ್ಮಾರಕಗಳ ಸಂರಕ್ಷಣೆಗೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಉಪಶಮನ ನಿಧಿ ಯೋಜನೆಯಡಿ ವ್ಯವಸ್ಥಿತ ಚರಂಡಿ ನಿರ್ವಹಣೆಗೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರೀಯವಾಗಿ ಭಾಗವಹಿಸಿ ಸ್ವಚ್ಛ ಸುಂದರ ನಗರಕ್ಕೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ ವಿಜಯಪುರ ನಗರದಲ್ಲಿ ಅಲ್ಲದೇ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ, ಎಲ್ಲರೂ ಒಟ್ಟಿಗೆ) ಎಂಬ ಘೋಷವ್ಯಾಖ್ಯದೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಅಧಿಕಾರಿಗಳು, ಜನ ಪ್ರತಿನಿಧಿಗಳು, ಶಾಲಾ ಮಕ್ಕಳು, ಸ್ವಯಂ ಸೇವಾ ಸಂಸ್ಥೇಗಳು ಸೇರಿ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರವರೆಗೆ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande