ಕೋಲಾರ, ೨೫ ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಖುದ್ದಾಗಿ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ, ಮುಳಬಾಗಿಲು ತಾಲ್ಲೂಕಿನ ಆವಣಿ ಹಾಗೂ ಕೋಲಾರ ನಗರದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದ ಅವರು, ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು.
ಸಮೀಕ್ಷೆಯ ವೇಳೆ ಎದುರಾಗುವ ತಾಂತ್ರಿಕ ಸಮಸ್ಯೆಗಳ ಕುರಿತು ಗಣತಿದಾರರೊಂದಿಗೆ ಚರ್ಚಿಸಿ, ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳ, ಉಪ ವಿಭಾಗಾಧಿಕಾರಿ ಡಾ. ಮೈತ್ರಿ, ನಗರಸಭೆ ಮುಖ್ಯ ಅಧಿಕಾರಿ ನವೀನ್ ಚಂದ್ರ, ಜಿಲ್ಲಾ ಸಾಂಖ್ಯೆಕಾ ಅಧಿಕಾರಿ ರಮೇಶ್, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಗೀತಮ್ಮ ತಾಲೂಕು ಅಧಿಕಾರಿ ಮಂಜುಳ, ಸೇರಿದಂತೆ ಮತ್ತಿತರ ಗಣತಿದಾರರು ಉಪಸ್ಥಿತರಿದ್ದರು.
ಚಿತ್ರ ; ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ, ಮುಳಬಾಗಿಲು ತಾಲ್ಲೂಕಿನ ಆವಣಿ ಹಾಗೂ ಕೋಲಾರ ನಗರದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಪರಿಶೀಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್