ಸಿಂಧನೂರು, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸೆ.27ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆ.21ರ ಬೆಳಿಗ್ಗೆ 6ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ಸಿಂಧನೂರು ನಗರಕ್ಕೆ ಆಗಮಿಸಿ ನಗರದ ಸತ್ಯಾ ಗಾರ್ಡನ್‌ನಲ್ಲಿ ಸಿಂಧನೂರು ನಗರದ ಪಿಡ್ಲೂಡಿ ಕ್ಯಾಂಪಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತು ನೂತನ ಹೊಸ ತಾಲ್ಲೂಕು ಪಂಚಾಯತ್ ಕಾರ್ಯಾಲಯ ಕಟ್ಟಡದ ಉದ್ಘಾಟನೆ ಹಾಗೂ ಸಿಂಧನೂರು ನಗರದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಕಟ್ಟಡ, ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಕಟ್ಟಡ, ಶ್ರೀ ಶಿವಶರಣೆ ಅಕ್ಕಮಹಾದೇವಿ ಮಹಿಳಾ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರ ವಸತಿ ನಿಲಯದ ಹಾಗೂ ನೂತನ ಜಿಟಿಟಿಸಿ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 2.30ಗಂಟೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾನವಿ ತಾಲ್ಲೂಕಿನ ಹಿರೇಕೊಟ್ಟೆಕಲ್ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾಗುವರು.
ಸಂಜೆ 4ಗಂಟೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾನವಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾಗಿ ಸಂಜೆ 6ಗಂಟೆಗೆ ಮಾನವಿ ತಾಲೂಕಿನ ಶ್ರೀ ಕಲ್ಮಠದಲ್ಲಿ ಶ್ರೀದೇವಿ ಪುರಾಣ ಹಾಗೂ ದಸರಾ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6ಗಂಟೆಗೆ ಮಾನವಿಯಿಂದ ರಸ್ತೆಯ ಮಾರ್ಗವಾಗಿ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್