ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ ಸಂಬ0ಧಿಸಿದ0ತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್.ಕೆ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಜಿಟಿಟಿಸಿ ಪ್ರಾಂಶುಪಾಲರು, ವಿಟಿಯು ಕೌಶಲ್ಯ ತರಬೇತಿ ಕೇಂದ್ರ ತಳಕಲ್‌ನ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್