ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಉಚ್ಚ ನ್ಯಾಯಾಲಯ ನಕಾರ
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಉಚ್ಚ ನ್ಯಾಯಾಲಯ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್
High Court


ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಉಚ್ಚ ನ್ಯಾಯಾಲಯ ನಿರಾಕರಿಸಿದೆ.

ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿ, ಅಂತಿಮವಾಗಿ ಇಂದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ.

ಜನರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ದತ್ತಾಂಶವನ್ನು ಸರಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.

ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹೇರಬಾರದು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ನ್ಯಾಯಾಲಯ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande