ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ : ಅರ್ಜಿ ಆಹ್ವಾನ
ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ : ಅರ್ಜಿ ಆಹ್ವಾನ


ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ), ವ್ಯಾಪಾರ, ಉದ್ಯಮಗಳಿಗೆ ನೇರ ಸಾಲ ಯೋಜನೆ, ವಿದೇಶಿ ವ್ಯಾಸಂಗಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಾಂತ್ವನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ಅಕ್ಟೋಬರ್ 16 ರೊಳಗೆ ವೆಬ್‌ಸೈಟ್: kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಫಲಾನುಭವಿಗಳು ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. 18 ರಿಂದ 55 ವರ್ಷ ವಯೋಮಿತಿ ಒಳಗಿರಬೇಕು. ಯೋಜನೆಗಳ ಕುರಿತಾದ ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ದೂ.ಸಂ: 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande