ಕೊಪ್ಪಳ : ಚಿಕ್ಕಬೊಮ್ಮನಾಳ-ಪೋಷಣ್ ಮಾಸಾಚರಣೆ
ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ಯೋಜನೆಯ ಚಿಕ್ಕಬೊಮ್ಮನಾಳ 1ನೇ ಕ
ಕೊಪ್ಪಳ : ಚಿಕ್ಕಬೊಮ್ಮನಾಳ: ಪೋಷಣ್ ಮಾಸಾಚರಣೆ


ಕೊಪ್ಪಳ : ಚಿಕ್ಕಬೊಮ್ಮನಾಳ: ಪೋಷಣ್ ಮಾಸಾಚರಣೆ


ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ಯೋಜನೆಯ ಚಿಕ್ಕಬೊಮ್ಮನಾಳ 1ನೇ ಕೇಂದ್ರದಲ್ಲಿ 8 ನೇ ರಾಷ್ಟಿಯ ಪೋಷಣ್ ಮಾಸಾಚರಣೆಯ ಅಂಗವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿಗಳಾದ ನಟರಾಜ ಅವರು, ಪಾಲಕರಿಗೆ ಪೋಷಣ್ ಮಾಸಾಚರಣೆ ಉದ್ದೇಶ ಮತ್ತು ಆರೋಗ್ಯ ಕುರಿತು, ಶಾಲಾ ಪೂರ್ವ ಶಿಕ್ಷಣ ಕುರಿತು ವಿವರವಾದ ಮಾಹಿತಿಯನ್ನು ಹಂಚಿಕೊ0ಡರು.

ಆರೋಗ್ಯವೇ ಭಾಗ್ಯ ಆರೋಗ್ಯವನ್ನು ಕಳೆದುಕೊಂಡರೆ ಎಲ್ಲವನ್ನು ಕಳೆದುಕೊಂಡ0ತೆ. ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ಎಲ್ಲರೂ ತಿಳಿದಿರಬೇಕು. ಅಂಗನವಾಡಿಯಲ್ಲಿ ನೀಡುವ ಶಾಲಾ ಪೂರ್ವ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಶಾಲಾ ಪೂರ್ವ ಶಿಕ್ಷಣದ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸಿದ್ದಪ್ಪ ಕುರಿ ಹಾಗೂ ವಲಯ ಮೇಲ್ವಿಚಾರಕರು, ಆರೋಗ್ಯ ಸಿಬ್ಬಂದಿ, ಮಕ್ಕಳು, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಹಾಗೂ ಗರ್ಭಿಣಿ, ಬಾಣಂತಿಯರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande