ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಸಿದ್ಧತೆ - ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದ್ದಾರೆ. ಅವರ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ


ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದ್ದಾರೆ.

ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ. 7 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವೇದಿಕೆ ಕಾರ್ಯಕ್ರಮ, ಪೂಜೆ, ಶ್ರೀ ಮಹರ್ಷಿ ವಾಲ್ಮೀಕಿ ರವರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ಜರುಗಲಿವೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಮಾರಂಭಕ್ಕೂ ಪೂರ್ವದಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣೆಗೆ ಹೊರಡುವ ಮಾರ್ಗದಲ್ಲಿ ಮತ್ತು ಸಾಹಿತ್ಯ ಭವನದಲ್ಲಿ ನಗರಸಭೆಯಿಂದ ಸ್ವಚ್ಛತಾ ಕಾರ್ಯವಾಗಬೇಕು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಮಾಡಿಕೊಡಬೇಕು. ಮೇರವಣಿಗೆಗೆ ವಿಶೇಷ ಕಲಾತಂಡಗಳನ್ನು ಕರೆತಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಆಚರಿಸುವಂತಾಗಬೇಕು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಗಬೇಕು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಹಿರಿಯರನ್ನು ಗುರುತಿಸಿ, ಗೌರವಿಸಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷಿಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಂ ಶೆಟ್ಟಪ್ಪನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ವಾಲ್ಮೀಕಿ ಸಮಾಜದ ಮುಖಂಡರಾದ ಶಂಕರಗೌಡ ಪಾಟೀಲ್, ಸುರೇಶ ಡೊಣ್ಣಿ, ಕೊಟೇಶ್ ತಳವಾರ, ವೆಂಕಟೇಶ್ ಪೂಜಾರ, ಲಕ್ಷ್ಮಣ ಚೌಡ್ಕಿ, ಶ್ರೀನಿವಾಸ ಗಿಣಿಗೇರಾ, ಶರಣಪ್ಪ ನಾಯಕ, ಗಿರಿಯಪ್ಪ ನಿಂಗಪ್ಪ ಡಂಬ್ರಳ್ಳಿ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande