ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಎಸ್. ಎಸ್. ಸಿಂಧೆ ಅವರ ನಿಧನಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಸ್. ಎಸ್. ಸಿಂಧೆ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಉತ್ತಮ ಕಾಯಕದ ಮೂಲಕ ಅವರು ಜನಸ್ನೇಹಿಯಾಗಿದ್ದರು. ಅವರ ತಂದೆಯವರ ಕಾಲದಿಂದಲೂ ನಮ್ಮ ಜೊತೆ ಒಡನಾಟ ಹೊಂದಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಮೃತರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande