ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರಿಗೆ : ಸ್ಥಾನ ಪ್ರಾಪ್ತವಾಗುವ ಮೂಲಕ ಜಿಲ್ಲೆಗೆ ಸರ್ಕಾರದಿಂದ ಮತ್ತೊಂದು ದಸರಾ ಬಂಪರ್ ಕೊಡುಗೆ ಸಿಕ್ಕಂತಾಗಿದೆ. ಈಗಾಗಲೇ ಜಿಲ್ಲೆಯ ಇಬ್ಬರು ಶಾಸಕರು ನಿಗಮ, ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಮತ್ತೊಂದು ಸ್ಥಾನ ಸಿಕ್ಕಿದೆ.
ಪಕ್ಷದ ಜಿಲ್ಲಾ ಕಚೇರಿ ನಿರ್ಮಾತೃ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ಎರಡು ಬಾರಿ ಶಾಸಕರಾಗಿ, ಕೃಷ್ಣಾ ಕಾಡಾ ಅಧ್ಯಕ್ಷರಾಗಿ, ಭೂಸೇನಾ ನಿಗಮದ ಅಧ್ಯಕ್ಷರಾಗಿ, ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಸಮಿತಿ ಅಧ್ಯಕ್ಷತೆ ಸೇರಿದಂತೆ ಪಕ್ಷ ಮತ್ತು ಸರ್ಕಾರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸುದೀರ್ಘ ಅವಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೊಂದು ಸ್ವಂತ ಕಟ್ಟಡ ನಿರ್ಮಾಣ ಮಾಡಿರುವುದಲ್ಲಿ ಅವರ ಪಾತ್ರ ಅನನ್ಯವಾಗಿದೆ.
ಹಿರಿಯ ಕಾಂಗ್ರಸ್ಸಿಗರಾಗಿರುವ ನಂಜಯ್ಯನಮಠ ಅವರಿಗೆ ಪಕ್ಷ ಇಲ್ಲವೆ ಸರ್ಕಾರದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಗಾಗ್ಗೆ ಹೇಳುತ್ತಲೇ ಇದ್ದರು. ಕಾರಣವಿಷ್ಟೆ, ಎಸ್. ಜಿ. ನಂಜಯ್ಯನಮಠ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವೇಳೆ ಡಿ.ಕೆ. ಶಿವಕುಮಾರ ಜಿಲ್ಲಾಧ್ಯಕ್ಷರಾಗಿದ್ದರಂತೆ. ಈಗ ಡಿ.ಕೆ. ಶಿವಕುಮಾರ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ವೇಳೆ ನಂಜಯ್ಯನಮಠ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande