ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನ : ಜೆಪಿ ನಡ್ಡಾ ಮತ್ತು ಜಾಧವ್ ಶ್ರಮದಾನ
ನವದೆಹಲಿ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಒಂದು ದಿನ, ಒಂದು ಗಂಟೆ, ಒಟ್ಟಿಗೆ ಎಂಬ ರಾಷ್ಟ್ರವ್ಯಾಪಿ ಸ್ವಯಂಪ್ರೇರಿತ ಸ್ವಚ್ಛತಾ ಅಭಿಯಾನದ ಭಾಗವಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ನಿರ್ಮಾಣ್ ಭವನ ಹಾಗೂ ವಿದೇಶಾಂಗ ಸಚಿವಾಲಯದ ಕಟ್ಟಡದ ಬಳಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿತ
Cleaning


ನವದೆಹಲಿ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಒಂದು ದಿನ, ಒಂದು ಗಂಟೆ, ಒಟ್ಟಿಗೆ ಎಂಬ ರಾಷ್ಟ್ರವ್ಯಾಪಿ ಸ್ವಯಂಪ್ರೇರಿತ ಸ್ವಚ್ಛತಾ ಅಭಿಯಾನದ ಭಾಗವಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ನಿರ್ಮಾಣ್ ಭವನ ಹಾಗೂ ವಿದೇಶಾಂಗ ಸಚಿವಾಲಯದ ಕಟ್ಟಡದ ಬಳಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿತು.

ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಅವರು ಸ್ವತಃ ಶ್ರಮದಾನ ಮಾಡಿ ರಸ್ತೆಗಳನ್ನು ಸ್ವಚ್ಛಗೊಳಿಸಿದರು. ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರೂ ಸಹ ಸಕ್ರಿಯವಾಗಿ ಪಾಲ್ಗೊಂಡರು.

ಅಭಿಯಾನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡ ನಡ್ಡಾ, ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ 'ಸೇವಾ ಪಖ್ವಾಡ'ದ ಅಂಗವಾಗಿ 'ಸ್ವಚ್ಛತಾ ಹಿ ಸೇವಾ - 2025' ಅಭಿಯಾನದಲ್ಲಿ ಪಾಲ್ಗೊಂಡೆ ಎಂದು ತಿಳಿಸಿದರು.

ಸ್ವಚ್ಛತಾ ಹಿ ಸೇವಾ ಅಭಿಯಾನದ ಗುರಿ, ಸಮುದಾಯದ ಭಾಗವಹಿಸುವಿಕೆ ಮೂಲಕ ಸಾರ್ವಜನಿಕರಲ್ಲಿ ಜವಾಬ್ದಾರಿತನವನ್ನು ಬೆಳೆಸುವುದು. ಸಚಿವಾಲಯದ ಎಲ್ಲಾ ವಿಭಾಗಗಳ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರವ್ಯಾಪಿ ಅಭಿಯಾನದ ಉತ್ಸಾಹವನ್ನು ಹೆಚ್ಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande