ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್, ಬೆಂಗಳೂರು, ಹಾಗೂ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿನ ಫಾರ್ಚೂನ್ ಹೋಟೆಲ್‌ನಲ್ಲಿ ಎಂ.ಎಸ್.ಎ0.ಇ. ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ (RAMP) ಯೋಜನೆಯಡಿಯಲ್ಲಿ ಟ್ರೇಡ್ಸ್ (TReDS) ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಕಾರ್ಯಾಗಾರವನ್ನು ಉದ್ಘಾಟಿಸುವರು, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಮನ್ಸೂರ್ ಅವರು ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರು ಟೆಕ್ಸಾಸ್‌ನ ಸಿ.ಇ.ಓ. ಮತ್ತು ಮುಖ್ಯ ಸಲಹೆಗಾರರಾದ ಸಿದ್ದರಾಜು, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೊಪ್ಪಳ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಕೊಪ್ಪಳದ ರಿಫಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಶಾಹಿದ್ ತಹಶೀಲ್ದಾರ್, ಕಾಸಿಯಾ ಪ್ರತಿನಿಧಿಯಾದ, ಪುಷ್ಪಲತಾ ಸುರೇಶ್, ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಮಾರುತಿ, ಕೊಪ್ಪಳ ಕೆ.ಎಸ್.ಎಫ್.ಸಿ ಯ ಶಾಖಾ ವ್ಯವಸ್ಥಾಪಕರಾದ ಸೋಮೇಶ ಎಂ. ಚಿಕ್ಕಮಠ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಎಂ.ಎಸ್. ಚವ್ಹಾಣ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕೆಯ ಸಹಾಯಕ ನಿರ್ದೇಶಕ (ಪ್ರಭಾರ) ಸೋಮಶೇಖರ ಬಿ. ಪಾಟೀಲ್ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್