ನವದೆಹಲಿ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯತಾವಾದಿ ಚಿಂತಕ ಹಾಗೂ ಅಂತ್ಯೋದಯದ ಆಧಾರಸ್ತಂಭ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯ ಅಂಗವಾಗಿ ಇಂದು ನವದೆಹಲಿ 6A, ದೀನದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತೆಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದು, “ಮಹಾತ್ಮ ಗಾಂಧಿಜಿಯವರ ತತ್ವಗಳನ್ನು ಅನುಸರಿಸಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನದಂದು ನಾವು ಸ್ವಚ್ಛತೆಗೆ ಒಂದು ಗಂಟೆ ಮೀಸಲಿಡೋಣ” ಎಂದು ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಾಧ್ಯಾಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಕೊಡುಗೆಗಳನ್ನು ಸ್ಮರಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಸ್ಮರಣಾರ್ಥವಾಗಿ ಗಿಡವೊಂದನ್ನು ನೆಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa