ರಾಯಚೂರು, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ 07 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯನ್ನು ಸೆಪ್ಟೆಂಬರ್ 29ರ ಮಧ್ಯಾಹ್ನ 04 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಗೆ ವಿವಿಧ ಸಂಘಟನೆಯ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್