ರಾಯಚೂರು, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 07ರವರೆಗೆ ನಡೆಯುತ್ತಿದ್ದು, ಈ ಸಮೀಕ್ಷಾ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರತಿನಿತ್ಯ ಬರುವ ಮಾಹಿತಿ, ದೂರು, ಆಕ್ಷೇಪಣೆ ಹಾಗೂ ಸಲಹೆ ಇತ್ಯಾದಿ ಬಗ್ಗೆ ಕರೆಗಳನ್ನು ಸ್ವೀಕರಿಸಿ ಸೂಕ್ತ ಮಾಹಿತಿ ನೀಡಲು ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆಂದು ಅಪರ ಜಿಲ್ಲಾಧಿಕಾರಗಳಾದ ಶಿವಾನಂದ ಅವರು ತಿಳಿಸಿದ್ದಾರೆ.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ದೂರವಾಣಿ ಸಂಖ್ಯೆ 08532-226383ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್