ಗದಗ, 25 ಸೆಪ್ಟೆಂಬರ್ (ಹಿ.ಸ.) ;
ಆ್ಯಂಕರ್ : ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಜರುಗಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ದಿವಾಣಿ ನ್ಯಾಯಾಧೀಶ ಸಿ.ಎಸ್.ಶಿವನಗೌಡರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ಹಲವಾರು ಕಾನೂನುಗಳಿದ್ದು, ಅವುಗಳ ಅರಿವು ಅವಶ್ಯಕವಾಗಿದೆ. ಮಹಿಳೆಯರ ಮಕ್ಕಳ ಅನೈತಿಕ ಸಾಗಾಣಿಕೆ ಬಗ್ಗೆ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಉಪ ಪೊಲೀಸ ವರಿಷ್ಟಾಧಿಕಾರಿ ಮಹಾಂತೇಶ ಸಜ್ಜನರ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಬಗ್ಗೆ ಜನರಿಗೆ ಅರಿವಿನ ಅವಶ್ಯಕತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆ.ವಿ.ಕೆ. ಮುಖ್ಯಸ್ಥರಾದ ಶ್ರೀಮತಿ ಸುಧಾ ಮಂಕಣಿ ಮಾತನಾಡಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಒಂದು ಸಾಮಾಜಿಕ ಪಿಡುಗಾಗಿದೆ ಎಂದರು.
ಮಧುಸೂಧನ್ ಬಿ.ಆರ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅನುಪಮಾ ಅಂಗಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಭಾಗೀದಾರ ಇಲಾಖೆಗಳ ಸಿಬ್ಬಂದಿ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP