ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ
ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸ
ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ


ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6-18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ದಿನಾಂಕ: 01.08.2024 ರಿಂದ 31.07.2025 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಅರ್ಹರು ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬ0ಧಿಸಿದ ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅಕ್ಟೋಬರ್ 4 ರೊಳಗೆ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande