ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ 60 ದಿನಗಳ ಅವಧಿಯ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ
ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ 60 ದಿನಗಳ ಅವಧಿಯ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವಿದ್ ತಿಳಿಸಿದ್ದಾರೆ.

ತರಬೇತಿಯ ಅಭ್ಯರ್ಥಿಗಳು http://dom.karnataka.gov.in ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಮಾರ್ಗಸೂಚಿಗಳ ಅನ್ವಯ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅಕ್ಟೋಬರ್ 3 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ, ಜನಾಂಗಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ, ಪಾಲಕ, ಪೋಷಕರ ಕುಟುಂಬದ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯು ದ್ವಿತೀಯ ಪಿಯುಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 27 ವರ್ಷದೊಳಗಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಕ್ಷೀಸಬಹುದು. ಅಭ್ಯರ್ಥಿಗಳು ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಮತ್ತು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande