ಬಳ್ಳಾರಿ, 26 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಶ್ರೀ ಕಬ್ಬಾಳಮ್ಮ ಕಲಾ ಕೃಷಿ ಟ್ರಸ್ಟ್ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ವತಿಯಿಂದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವು ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಶ್ರೀಮತಿ ಹುಲಿಗೆಮ್ಮ ಮತ್ತು ತಂಡ ಇವರಿಂದ ಬಳ್ಳಾರಿ ತಾಲೂಕಿನ ಚಾನಾಳು ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಬಯಲು ವೇದಿಕೆಯಲ್ಲಿ `ಬಸವ ಜ್ಯೋತಿ’ ತೊಗಲುಗೊಂಬೆ ಪ್ರದರ್ಶನ ನಡೆಯಿತು.
ಚಾನಾಳು ಗ್ರಾಮದ ಮುಖಂಡರಾದ ಸಿ.ಆರ್. ವಿರೂಪಾಕ್ಷರೆಡ್ಡಿ ಅವರು ತೊಗಲುಗೊಂಬೆ ಪ್ರದರ್ಶನವನ್ನು ಉದ್ಘಾಟಿಸಿದರು. ಚಾನಾಳ್ ಗ್ರಾಪಂ ಸದಸ್ಯ ವಿ.ನಾಗರಾಜರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಗ್ರಾಪಂ ಸದಸ್ಯೆ ಯಲ್ಲಮ್ಮ ಶೇಖರಪ್ಪ, ಗ್ರಾಪಂ ಬಿಲ್ ಕಲೆಕ್ಟರ್ ಜಿ. ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂನ ಹಳ್ಳಪ್ಪ ಸ್ವಾಗತಿಸಿದರು. ಗ್ರಾಪಂ ಸಿಬ್ಬಂದಿ ತಿಪ್ಪಮ್ಮ ಕಾರ್ಯಕ್ರಮ ನಿರೂಪಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್