ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೆ.27 ರಂದು ಹೊಸಪೇಟೆಗೆ ಆಗಮಿಸಲಿದ್ದಾರೆ.
ಸೆ.26 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಂಜೆ 4:10 ಕ್ಕೆ ಆಗಮಿಸಲಿದ್ದಾರೆ.
ಸಂಜೆ 4:15ಕ್ಕೆ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣದಿಂದ ತೋರಣಗಲ್ಲು ಬಳ್ಳಾರಿ ರಸ್ತೆ ಮಾರ್ಗದಲ್ಲಿ ಹೊಸಪೇಟೆಗೆ ಸಂಜೆ 5:15 ಕ್ಕೆ ಆಗಮಿಸಲಿದ್ದಾರೆ. ಸೆ.27 ರಂದು ಬೆ.10 ಗಂಟೆಗೆ ವಿಜಯನಗರ ಜಿಲ್ಲಾ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ನ್ಯಾಯಾಲಯದ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಧಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧಾಹ್ನ 2:30 ರಿಂದ ಸಂಜೆ 6 ಗಂಟೆಗೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಸೆ.29 ರಂದು ಬೆಳಿಗ್ಗೆ 09:30 ಕ್ಕೆ ಹೊಸಪೇಟೆ ರಸ್ತೆ ಮಾರ್ಗದಿಂದ ಬಳ್ಳಾರಿಗೆ ತೆರಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್