ಶಿವಮೊಗ್ಗ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಸೆ. 27 ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕುರಿತು ವಿಶೇಷವಾಗಿ ಲೋಗೋ, ವೆಬ್‌ಸೈಟ್, ಟ್ಯಾಗ್‌ಲೈನ್, ವಿಡಿಯೋಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಎಸ್. ಮಧು ಬಂಗಾರಪ್ಪರವರು ಲೋಕಾರ್ಪಣೆಗೊಳಿಸುವರು.
ಈ ಕಾರ್ಯಕ್ರಮದ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಸೆ.27 ರಿಂದ ಅ.2 ರವರೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರ ಮತ್ತು ವಿಡಿಯೋ ಪ್ರದರ್ಶನವನ್ನು ಉಚಿತವಾಗಿ ಏರ್ಪಡಿಸಲಾಗಿದ್ದು, ಪ್ರವಾಸೋದ್ಯಮ ಪ್ರಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa