ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಸೆ.27 ರಂದು ಮಧಾಹ್ನ 2 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ ಅಲಿ ಅಕ್ರಮ ಷಾ ಅವರು ತಿಳಿಸಿದ್ದಾರೆ.
ಆದ್ದರಿಂದ ಇಲಾಖೆಗಳ ಅನುಷ್ಠಾನಗೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳ 2025-26ನೇ ಸಾಲಿನ ಏ.1 ರಿಂದ ಜೂ.30 ರವರೆಗೆ ಪ್ರಗತಿ ವರದಿಯ ಪೂರ್ಣ ವಿವರಗಳೊಂದಿಗೆ ಅಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಲು ಸೂಚಿಸಲಾಗಿದೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್