ಬಳ್ಳಾರಿ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ 2021 ರಿಂದ ಇಲ್ಲಿಯವರೆಗೆ 20 ಮಕ್ಕಳು ಕಾಣೆಯಾಗಿದ್ದು, ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿ ಮಕ್ಕಳ ಪೋಷಕರೊಂದಿಗೆ ಮಕ್ಕಳ ಪತ್ತೆಹಚ್ಚುವಿಕೆಗೆ ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ನವೀನ್ ಕುಮಾರ್ ಅವರು ತಿಳಿಸಿದ್ದಾರೆ.
ಎಸ್‍ಪಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ `ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ವಿಶೇಷ ಕಾರ್ಯಪಡೆಯ ಸಮಿತಿ’ಯ ಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು, ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳಿಗೆ ಸಂಬಂಧಿಸಿದಂತೆ ಎಲ್ಲಾ ಶಾಲೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಬೇಕು. ಕಾಣೆಯಾಗಿರುವ ಮಕ್ಕಳ ಪೆÇೀಷಕರನ್ನು ಕರೆಯಿಸಿ ಅವರಿಗೆ ಆಪ್ತ ಸಮಾಲೋಚನೆ ನಡೆಸಬೇಕು. ಶಾಲೆಗಳಲ್ಲಿ ಸಲಹಾ ಪೆಟ್ಟಿಗೆಯನ್ನು ಇರಿಸಿ, ಪ್ಯಾರಾಲೀಗಲ್ ವಾಲೆಂಟಿಯರ್ಸ್‍ರವರ ಸಹಾಯ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಎಲ್ಲಾ ಶಾಲೆಗಳಲ್ಲಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ 1098 ಹೊಸ ಲೋಗೋದೊಂದಿಗೆ ಗೋಡೆ ಬರಹ ಬರೆಸಬೇಕು ಎಂದು ಹೇಳಿದರು.
ಶಾಲೆ ಮತ್ತು ಕಾಲೇಜುಗಳಲ್ಲಿ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳು ಶಾಲೆಗೆ ನಿರಂತರ ಗೈರು ಹಾಜರಾಗಿದ್ದರೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಅಥವಾ 1098ಕ್ಕೆ ಕರೆ ಮಾಡಿ ತಿಳಿಸಬೇಕು ಎಂದರು.
ಸಭೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರು, ಪ್ಯಾರಾಲೀಗಲ್ ವ್ಯಾಲೆಂಟಿಯರ್ಸ್, ಬಾಲನ್ಯಾಯ ಮಂಡಳಿಯ ಸದಸ್ಯರು, ಠಾಣಾಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್