ಬಳ್ಳಾರಿ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರ ವಿಶೇಷ ಕಾಳಜಿಯಿಂದ ದಸರಾ ಹಬ್ಬದ ಪ್ರಯುಕ್ತ ಬಳ್ಳಾರಿ-ವಿಜಯನಗರ ರೈಲು ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.
ವಿಜಯನಗರ ರೈಲ್ವೆ ಬಳಕೆದಾರರ ಸಮಿತಿಯು ಬಳ್ಳಾರಿ- ಹೊಸಪೇಟೆ -ಕೊಪ್ಪಳ ಭಾಗದ ಜನರು ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಬೆಂಗಳೂರು - ಮೈಸೂರು ನಿಂದ ಬಳ್ಳಾರಿ - ಹೊಸಪೇಟೆಗೆ ತೆರಳಲು ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಸಂಸದ ಈ.ತುಕಾರಾಮ್ ಅವರು ಸಂಬ0ಧಪಟ್ಟ ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಕೋರಿದ ಮೇರೆಗೆ ರೈಲ್ವೆ ಇಲಾಖೆಯು ಬಳ್ಳಾರಿ-ವಿಜಯನಗರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚರಿಸಲು ಅನುವು ಮಾಡಿಕೊಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್