ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ : ನೋಂದಣಿಗೆ ರೈತರಲ್ಲಿ ಮನವಿ
ಕೊಪ್ಪಳ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‍ಗೆ ರೂ.7721/- ರಂತೆ ಗರಿಷ್ಠ 15,650 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿ
ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ : ನೋಂದಣಿಗೆ ರೈತರಲ್ಲಿ ಮನವಿ


ಕೊಪ್ಪಳ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‍ಗೆ ರೂ.7721/- ರಂತೆ ಗರಿಷ್ಠ 15,650 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 26 ರಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಸಭೆಯಲ್ಲಿ ಸೂರ್ಯಕಾಂತಿ ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಖರೀದಿ ಕೇಂದ್ರಗಳಾದ ಅಳವಂಡಿಯ ಕೆಒಎಫ್ ಅಡಿಯಲ್ಲಿ ಒಜಿಸಿಎಸ್ ಅಳವಂಡಿ, ಕುಕನೂರಿನ ಕೆಒಎಫ್ ಅಡಿಯಲ್ಲಿ ಒಜಿಸಿಎಸ್ ಮಂಡಲಗೇರಿ, ಯಲಬುರ್ಗಾದ ಕೆಒಎಫ್ ಅಡಿಯಲ್ಲಿ ಒಜಿಸಿಎಸ್ ಬೇವೂರು ಹಾಗೂ ನಾಗನಕಲ್‍ನ ಕೆಒಎಫ್ ಅಡಿಯಲ್ಲಿ ಒಜಿಸಿಎಸ್ ನಾಗನಕಲ್‍ನ ನೋಂದಣಿ ಕೇಂದ್ರದಲ್ಲಿ ರೈತರು ನೋಂದಣಿ ಮಾಡಿಕೊಳ್ಳಬಹುದು.

ಖರೀದಿ ಕೇಂದ್ರಗಳ ವ್ಯವಸ್ಥಿತ ನಿರ್ವಹಣೆಗೆ ಕೊಪ್ಪಳ ತಾಲ್ಲೂಕಿನ ಅಳವಂಡಿ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕೊಪ್ಪಳ ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಮೊ.ಸಂ: 9902224089, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಮಂಡಲಗೇರಿ ಹಾಗೂ ಬೇವೂರು ಖರೀದಿ ಕೇಂದ್ರಗಳ ನೋಡಲ್ ಅಧಿಕಾರಿಗಳಾಗಿ ಯಲಬುರ್ಗಾ ಎಪಿಎಂಸಿಯ ಕಾರ್ಯದರ್ಶಿ ಗುರುಪ್ರಸಾದ ಗುಡಿ, ಮೊ.ಸಂ: 9972054874, ಕಾರಟಗಿ ತಾಲ್ಲೂಕಿನ ನಾಗನಕಲ್ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕಾರಟಗಿ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಹರೀಶ ಪತ್ತಾರ, ಮೊ.ಸಂ: 9060893320 ಇವರನ್ನು ನಿಯೋಜಿಸಲಾಗಿದೆ.

ಪ್ರತಿ ಎಕರೆಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‍ನಂತೆ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಮಾತ್ರ ಖರೀದಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೇಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು, ವಿಭಾಗೀಯ ಕಛೇರಿ, ಕೊಪ್ಪಳ ಮೊ.ಸಂ: 9591812142 ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande