ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ತಾಲೂಕು ಮಟ್ಟದ ಸಹಾಯವಾಣಿ ಆರಂಭ
ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಯಾವುದೇ ಸಂದೇಹ ಅಥವಾ ಪ್ರಶ್ನೆಗಳಿಗಾಗಿ ಸೆ.22 ರಿಂದ ಅಕ್ಟೋಬರ 7 ರವರೆಗೆ ಬೆ. 10 ರಿಂದ ಸಂಜೆ 7 ರವರೆಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ತಾಲೂಕು ಮಟ್ಟದ ಸಹಾಯವಾಣಿ ಆರಂಭ


ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಯಾವುದೇ ಸಂದೇಹ ಅಥವಾ ಪ್ರಶ್ನೆಗಳಿಗಾಗಿ ಸೆ.22 ರಿಂದ ಅಕ್ಟೋಬರ 7 ರವರೆಗೆ ಬೆ. 10 ರಿಂದ ಸಂಜೆ 7 ರವರೆಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯ ತಾಲೂಕುವಾರು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯ ಹೊಸಪೇಟೆ ತಾಲೂಕಿನ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯ ದೂ.08394-796292, ಎಲ್ಲಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗಳ ಹಗರಿಬೊಮ್ಮನಹಳ್ಳಿ ಮೊ.9535927886, ಕೂಡ್ಲಿಗಿ ಮೊ.9483128036, ಕೊಟ್ಟೂರು ಮೊ.7019834344, ಹೂವಿನಹಡಗಲಿ ಮೊ.8088182385 ಮತ್ತು ಹರಪನಹಳ್ಳಿ ಮೊ.6361445305 ಸಮೀಕ್ಷೆಯ ಯಾವುದೇ ಸಂದೇಹ ಅಥವಾ ಪ್ರಶ್ನೆಗಳನ್ನು ಬಗೆಹರಿಸಿಕೊಳ್ಳಲು ಕಚೇರಿಗಳ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande