ಇಂದು‌ ಸಾಹಿತಿ ಎಸ್‌.ಎಲ್. ಭೈರಪ್ಪ ಅಂತ್ಯಕ್ರಿಯೆ
ಮೈಸೂರು, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್‌.ಎಲ್. ಭೈರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶವಗಾರದ
Slb


ಮೈಸೂರು, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್‌.ಎಲ್. ಭೈರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶವಗಾರದಿಂದ ಪಾರ್ಥಿವ ಶರೀರವನ್ನು ಮೈಸೂರಿನ ಕುವೆಂಪುನಗರದ ನಿವಾಸಕ್ಕೆ ಕರೆದೊಯ್ಯಲಾಗಿದ್ದು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಕುಟುಂಬಸ್ಥರಿಂದ ಅಂತಿಮ ಪೂಜೆ ವಿಧಿವಿಧಾನ ನೆರವೇರಲಿದೆ.

ಬೆಳಗ್ಗೆ 11.30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ, ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಹಲವು ರಾಜಕೀಯ ಮುಖಂಡರು, ಸಾಹಿತಿಗಳು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ನಂತರ ಮೈಸೂರಿಗೆ ಸಾಗಿಸಿ, ಕಲಾಮಂದಿರದಲ್ಲಿ ಸಹ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಅಭಿಮಾನಿಗಳು, ಓದುಗರು ಅಂತಿಮ ದರ್ಶನಕ್ಕಾಗಿ ಹರಿದು ಬಂದರು.

ಎಸ್‌.ಎಲ್. ಭೈರಪ್ಪ ಅವರು ತಮ್ಮ ದೀರ್ಘ ಸಾಹಿತ್ಯ ಜೀವನದಲ್ಲಿ 25 ಕಾದಂಬರಿಗಳು, 6 ಪ್ರಬಂಧ ಸಂಕಲನಗಳು, 1 ಆತ್ಮಚರಿತ್ರೆ ಸೇರಿದಂತೆ ಅನೇಕ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಅವರ ಕಾದಂಬರಿಗಳ ಆಧಾರದಲ್ಲಿ 4 ಚಲನಚಿತ್ರಗಳೂ ಮೂಡಿಬಂದಿವೆ.

ದಶಕಗಳ ಕಾಲ ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿಸಿದ ಭೈರಪ್ಪರ ಅಗಲಿಕೆ, ಕರುನಾಡಿಗೆ ತುಂಬಲಾರದ ನಷ್ಟವೆಂದು ಸಾಹಿತ್ಯ ವಲಯ ಶೋಕ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande