ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನ ಗಣೇಶ ವಿಸರ್ಜನಾ ಮಹೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಮತಾಂಧ ಪುಂಡರು ನಡೆಸಿದ ವಿಧ್ವಂಸಕ ಕೃತ್ಯದ ಘಟನೆಯ ಕುರಿತು ಬಿಜೆಪಿ ಪಕ್ಷ ರಚಿಸಿದ್ದ ಸತ್ಯ ಶೋಧನಾ ಸಮಿತಿಯ ವರದಿಯನ್ನು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ ರೆಡ್ಡಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ರಾಜ್ಯ ಮುಖ್ಯ ವಕ್ತಾರರಾದ ಅಶ್ವಥ್ ನಾರಾಯಣ ಗೌಡ, ಜಿಲ್ಲಾಧ್ಯಕ್ಷರಾದ ಡಾ.ಇಂದ್ರೇಶ್ ಸೇರಿದಂತೆ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa