ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ ದುಷ್ಟರ ದಾಳಿ ಸರಣಿರೂಪದಲ್ಲಿ ಮುಂದುವರೆಯುತ್ತಲೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿ ಕೋಮು ಉದ್ವಿಗ್ನತೆ ಪ್ರಚೋದಿಸುವ ಬ್ಯಾನರ್ ಅಳವಡಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿ ಆತಂಕಮಯ ವಾತಾವರಣ ಸೃಷ್ಟಿಸಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಪಾಲ್ಗೊಂಡ ದುಷ್ಕರ್ಮಿಗಳನ್ನು ಪೊಲೀಸರು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa