ಅ.3 ರಂದು ನಗರದಲ್ಲಿ ಸಚಿವ ಶಿವಾನಂದ ಪಾಟೀಲರಿಂದ ಬನ್ನಿ ವಿನಿಮಯ
ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ಆಕ್ಟೋಬರ್ 3 ರಂದು ನಗರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 2004 ರಿಂದ ಸಚಿವರಾದ ಶಿವಾನ
ಪಾಟೀಲ


ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ಆಕ್ಟೋಬರ್ 3 ರಂದು ನಗರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

2004 ರಿಂದ ಸಚಿವರಾದ ಶಿವಾನಂದ ಪಾಟೀಲ ಅವರು ನಗರದಲ್ಲಿರುವ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯದೊಂದಿ ವಿಜಯ ದಶಮಿ ಹಬ್ಬದ ಶುಭಾಶಯ ಸಮಾರಂಭ ಆಯೋಜಿಸುತ್ತಾ ಬರುತ್ತಿದ್ದಾರೆ.

ಈ ಬಾರಿ ಆಕ್ಟೋಬರ್ 3 ರಂದು ಬೆಳಿಗ್ಗೆಯಿಂದ ವಿಜಯಪುರ ನಗರದ ರಿಂಗ್ ರಸ್ತೆಯ ಬಬಲೇಶ್ವರ ಮಾರ್ಗದ ತೋಟದ ಮನೆಯಲ್ಲಿ ಬನ್ನಿ ವಿನಿಮಯ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande