ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತ್, ಮೆಟ್ರೋ ಕಾಮಗಾರಿ ಪ್ರದೇಶ ಸೇರಿದಂತೆ ನಗರದ ವಿವಿಧೆಡೆ ಮುಖ್ಯಮಂತ್ರಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಮುಖ್ಯಮಂತ್ರಿ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು.
ಕಾರಿನಿಂದ ಇಳಿದ ಮುಖ್ಯಮಂತ್ರಿ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ಕ್ರಮಕ್ಕೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa