ಪ್ರವಾಸೋದ್ಯಮ ಬೆಳವಣಿಗೆಯಿಂದ ದೇಶದ ಅಭಿವೃದ್ದಿ : ಭಾಂಡಗೆ
ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅನ್ಯ ರಾಷ್ಟ್ರಗಳಿಗೆ ಪೈಪೋಟಿ ನೀಡುವತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೆಳೆಯುತ್ತಿರುವ ಭಾರತವನ್ನು ವಿಶ್ವವೇ ನೋಡುತ್ತಿದ್ದು ಆ ನಿಟ್ಟಿನಲ್ಲಿ ಪ್ರವಾಸೋದ್ಯಮವೂ ಬೆಳೆಯಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಪ್ರವಾಸೋದ್ಯಮ


ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅನ್ಯ ರಾಷ್ಟ್ರಗಳಿಗೆ ಪೈಪೋಟಿ ನೀಡುವತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೆಳೆಯುತ್ತಿರುವ ಭಾರತವನ್ನು ವಿಶ್ವವೇ ನೋಡುತ್ತಿದ್ದು ಆ ನಿಟ್ಟಿನಲ್ಲಿ ಪ್ರವಾಸೋದ್ಯಮವೂ ಬೆಳೆಯಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಐತಿಹಾಸಿಕ ತಾಣ ಐಹೊಳೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ಸಂದೇಶ ಸಾರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಐತಿಹಾಸಿಕ ತಾಣಗಳನ್ನು ಜಗತ್ತಿನ ಇತಿಹಾಸದಲ್ಲಿ ಕಾಣುತ್ತಿದ್ದೇವೆ. ಆದರೆ ನಮ್ಮ ಪರಂಪರೆಯ ತಾಣಗಳನ್ನು ಬೆಳೆಸುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಸಂಸ್ಕೃತಿ, ಪರಂಪರೆ ಬೆಳವಣಿಗೆಗೆ ಪ್ರವಾಸೋದ್ಯಮ ಪೂರಕವಾಗಿದೆ. ಹಲವು ಅಭಿವೃದ್ಧಿಗೆ ರಾಜ್ಯ ಹಾಗೂ ಜಿಲ್ಲೆ ಪೂರಕವಾಗಿದೆ. ಇಲ್ಲಿ ಯಾವುದೇ ಯುದ್ಧ, ಮಹಾಪೂರ, ಉಗ್ರರ ಭೀತಿ ಇಂತಹ ಯಾವುದೇ ಚಟುವಟಿಕೆಗಳಿಗೆ ಆಸ್ಪದವಿಲ್ಲ. ಸಮೃದ್ಧವಾಗಿರುವ ನಾಡು ಕಟ್ಟುವ ಮೂಲಕ ಆರ್ಥಿಕತೆ ಹೆಚ್ಚಿಸೋಣ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ವಿಶ್ವ ಪರಂಪರೆಯ ತಾಣ ಹೊಂದಿರುವ ಜಿಲ್ಲೆಯಲ್ಲಿ ಪ್ರವಾಸಿ ಸರ್ಕ್ಯೂಟ್ ನಿರ್ಮಾಣಕ್ಕಾಗಿ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಐಹೊಳೆ ಹಾಗೂ ಪಟ್ಟದಕಲ್‌ನಲ್ಲಿ 3 ಸ್ಟಾರ್ ಹೋಟೆಲ್ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ವರ್ಷದೊಳಗೆ ಪೂರ್ಣಗೊಳ್ಳಲಿವೆ. ಪ್ರವಾಸೋದ್ಯಮ ಬೆಳವಣಿಗೆಯಿಂದ ಆರ್ಥಿಕ ಅಭಿವೃದ್ಧಿ ಮಾತ್ರವಲ್ಲದೆ ಸಂಸ್ಕೃತಿ, ಪರಂಪರೆ ಕಾಪಾಡಿಕೊಂಡು ಹೋಗಬಹುದು. ಭವಿಷ್ಯ ರೂಪಿಸುವ ಉದ್ಯಮವಾಗಿ ಪ್ರವಾಸೋದ್ಯಮ ಬೆಳೆಯಲಿದೆ ಎಂದು ಹೇಳಿದರು.

ಕಮತಗಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಪರವೀನಕೌಸರ ಮೋಮಿನ್ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಸಂಗಪ್ಪ, ಎಡಿಸಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್, ಪುರಾತತ್ವ ಇಲಾಖೆ ಅಧೀಕ್ಷಕ ರಮೇಶ ಮೂಲಿಮನಿ, ಸಹಾಯಕ ಸಂರಕ್ಷಣಾಧಿಕಾರಿ ಪ್ರಶಾಂತ ಕುಲಕರ್ಣಿ, ಗ್ರಾಪಂ ಅಧ್ಯಕ್ಷ ಹನಮಂತಗೌಡ ಪಾಟೀಲ, ಕೆಎಂಎಫ್ ನಿರ್ದೇಶಕ ಸಂಗಣ್ಣ ಹಂಡಿ, ಬಿ.ಸಿ.ಅಂಟರತಾನಿ, ಯುವರಾಜ ದೇಸಾಯಿ ಇತರರಿದ್ದರು.

ವಿಜೇತರಿಗೆ ಬಹುಮಾನ, ಸನ್ಮಾನ : ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಸೌಮ್ಯ ಚೊಳಚಗುಡ್ಡ (ಪ್ರಥಮ), ಪೂರ್ಣಿಮಾ ಹೊಸಮನಿ (ದ್ವಿತೀಯ), ಸುಜಾತಾ ತೋಳಮಟ್ಟಿ, ರೋಹಿಣಿ ಬೆಣ್ಣೂರ (ತೃತೀಯ), ಭಾಷಣ ಸ್ಪರ್ಧೆಯಲ್ಲಿ ಜಯಶ್ರೀ ತಿಗಳನ್ನವರ (ಪ್ರಥಮ), ಸವಿತಾ ಪತ್ತಾರ (ದ್ವಿತೀಯ), ಸಬಿಯಾಕೌಸರ್ ಲಾಠಿ (ತೃತೀಯ), ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಕುಂಬಾರ (ಪ್ರಥಮ), ರಾಜೇಶ್ವರಿ ಹಿರೇಮಠ (ದ್ವಿತೀಯ), ಸಾವಿತ್ರಿ ಹೂಲಗೇರಿ (ತೃತೀಯ) ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು. ಉತ್ತಮ ಪ್ರವಾಸಿ ಮಾರ್ಗದರ್ಶಿ ಎಸ್.ಬಿ.ಮಾಯಾಚಾರಿ ಹಾಗೂ ಉತ್ತಮ ಪ್ರವಾಸಿ ಮಿತ್ರ ಯಮನಪ್ಪ ಭಜಂತ್ರಿ ಅವರನ್ನು ಸನ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande