ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಎಂಟು ಜನರ ರಕ್ಷಣೆಯನ್ನು ಮಾಡಲಾಗಿದೆ.
ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ತಾವರಖೇಡ ಗ್ರಾಮದಲ್ಲಿ ಸಿಲುಕಿದ ಎಂಟು ಜನರನ್ನು ದೋಣಿ ಮುಖಾಂತರ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಾವರಖೇಡ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಕಡೆಗೂ ಭೀಮಾನದಿಯ ನೀರು ಆವರಿಸಿದೆ. ಪ್ರವಾಹದಲ್ಲಿ ಸಿಲುಕಿಕೊಂಡಿದವರನ್ನು ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande