ಗುರುಗ್ರಾಮ: ಥಾರ್ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ;ಐವರ ಸಾವು
ಗುರುಗ್ರಾಮ್, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವೇಗವಾಗಿ ಬಂದ ಥಾರ್ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿರುವ ಘಟನೆ ಹರಿಯಾಣದ ಗುರುಗ್ರಾಮನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಯುವತಿಯರು ಮತ್ತು ಇಬ್ಬರು ಯುವಕರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒರ
Accident


ಗುರುಗ್ರಾಮ್, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವೇಗವಾಗಿ ಬಂದ ಥಾರ್ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿರುವ ಘಟನೆ ಹರಿಯಾಣದ ಗುರುಗ್ರಾಮನಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಯುವತಿಯರು ಮತ್ತು ಇಬ್ಬರು ಯುವಕರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಥಾರ್ ಕಾರು ಸಂಪೂರ್ಣವಾಗಿ ನಾಶವಾಗಿದೆ.

ವರದಿಗಳ ಪ್ರಕಾರ, ಥಾರ್ ವಾಹನದಲ್ಲಿ ಮೂವರು ಯುವಕರು ಮತ್ತು ಮೂವರು ಯುವತಿಯರು ಪ್ರಯಾಣಿಸುತ್ತಿದ್ದರು. ಅವರು ಉತ್ತರ ಪ್ರದೇಶದಿಂದ ಗುರುಗ್ರಾಮ್‌ಗೆ ಕೆಲಸದ ನಿಮಿತ್ತ ಬಂದಿದ್ದರು.

ವಾಹನವು ರಾಜೀವ್ ಚೌಕ್ ಕಡೆಗೆ ಹೋಗಲು ನಿರ್ಗಮನ 9 ರಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಿಂದ ನಿರ್ಗಮಿಸುತ್ತಿದ್ದಾಗ, ಚಾಲಕನ ಅತಿ ವೇಗದ ಕಾರಣ ವಾಹನದ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅತಿ ವೇಗದಿಂದಾಗಿ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande