ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಸೂಚನೆ
ಹಾಸನ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪೋಕ್ಸೋ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮವಹಿಸುವಂತೆ ಹಾಸನ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಮತ್
ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಸೂಚನೆ


ಹಾಸನ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪೋಕ್ಸೋ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮವಹಿಸುವಂತೆ ಹಾಸನ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಮತ್ತು ಜಿಲ್ಲಾ ಮಟ್ಟದ ಬಾಲನ್ಯಾಯ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವುದರ ಮೂಲಕ ಸಂಕಷ್ಟಕ್ಕೆ ಸಿಲುಕುವವರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ನಿರ್ದೇಶನ ನೀಡಿದರು.

ಪೋಕ್ಸೋ ಕಾಯ್ದೆ ಅಡಿ ಶಿಕ್ಷೆ ಆಗಿರುವ ಬಗ್ಗೆ ಮಾಧ್ಯಮದಲ್ಲಿ ಪ್ರಚಾರ ಆದರೆ ಜನರಲ್ಲಿ ಸ್ಪಲ್ಪ ಭಯ ಬರುತ್ತದೆ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರಲ್ಲದೆ, ವೃತ್ತಿಗೆ ದ್ರೋಹ ಮಾಡಬಾರದು ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ಪ್ರಕರಣಗಳನ್ನು ಕಡಿಮೆ ಮಾಡಲು ಎಲ್ಲರ ಪ್ರಯತ್ನ ಅತ್ಯಗತ್ಯ ಎಂದ ಅವರು ಸಾರ್ವಜನಿಕರಿಗೆ ಹೆಚ್ಚು ಹೆಚ್ಚು ಕಾನೂನಿನ ಅರಿವು ಮೂಡಿಸಿ ಎಂದು ತಿಳಿಸಿದರಲ್ಲದೆ, ಸುಶಿಕ್ಷಿತ ಸಂಸ್ಕಾರವನ್ನು, ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಇಲ್ಲವಾದಲ್ಲಿ ಮಕ್ಕಳಲ್ಲಿ ಅಪರಾಧದ ಸಂಖ್ಯೆ ಹೆಚ್ಚಳವಾಗುವುದು. ಈ ಬಗ್ಗೆ ಪೋಷಕರು, ಶಿಕ್ಷಕರು, ಸಮುದಾಯ, ಸಮಾಜ ಎಲ್ಲಾರೂ ಒಂದಾಗಿ ಶ್ರಮಿಸಬೇಕು ಮತ್ತು ಮಕ್ಕಳಲ್ಲಿ ಅಪರಾಧಿಯ ಭಾವನೆ ಬೆಳೆಯದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande