ಧಾರವಾಡ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲ ಮುಖಂಡರುಗಳ ಸಭೆಗೆ ಹಾಜರಾಗಬೇಕೆಂದು ಧಾರವಾಡ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa