ಶಿವಮೊಗ್ಗ, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸಿಗಂದೂರು ಬಳಿಯ ಕೂರನಕೊಪ್ಪದ ಬಳಿ ಪ್ರವಾಸಿಗರಿದ್ದ ಟಿಟಿ ವಾಹನ ಉರುಳಿ ಬಿದ್ದು 12 ಮಹಿಳೆಯರು ಹಾಗೂ ವಾಹನ ಚಾಲಕ ಗಾಯಗೊಂಡಿದ್ದಾರೆ. ಇವರೆಲ್ಲ ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಆಗಮಿಸಿದ್ದರು.
ಬೆಂಗಳೂರಿನಿಂದ ರೈಲಿನ ಮೂಲಕ ಸಾಗರಕ್ಕೆ 12 ಮಹಿಳೆಯರ ತಂಡ ಆಗಮಿಸಿ, ಅಲ್ಲಿಂದ ಟಿಟಿ ವಾಹನ ಮಾಡಿಕೊಂಡು ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಹೋಗುತ್ತಿದ್ದರು. ಈ ವೇಳೆ ಕೂರನಕೊಪ್ಪ ಸಮೀಪದಲ್ಲಿ ವಾಹನ ಉರುಳಿ ಬಿದ್ದು 12 ಮಹಿಳೆಯರಲ್ಲಿ ಮೂರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ. ಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa