ಏಷ್ಯಾಕಪ್ 2025 ಫೈನಲ್ : ಭಾರತ ಪಾಕಿಸ್ತಾನ ಮುಖಾಮುಖಿ
ದುಬೈ, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕ್ರಿಕೆಟ್ ಪ್ರೇಮಿಗಳು ಕಾಯುತ್ತಿದ್ದ ಕ್ಷಣ ಬಂದಿದೆ. ಇಂದು ನಡೆಯಲಿರುವ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿ
ಏಷ್ಯಾಕಪ್ 2025 ಫೈನಲ್ : ಭಾರತ ಪಾಕಿಸ್ತಾನ ಮುಖಾಮುಖಿ


ದುಬೈ, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕ್ರಿಕೆಟ್ ಪ್ರೇಮಿಗಳು ಕಾಯುತ್ತಿದ್ದ ಕ್ಷಣ ಬಂದಿದೆ. ಇಂದು ನಡೆಯಲಿರುವ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ–ಪಾಕಿಸ್ತಾನ ಫೈನಲ್‌ನಲ್ಲಿ ಎದುರಾಗುತ್ತಿದ್ದು, ಈ ಕಾರಣಕ್ಕೂ ಪಂದ್ಯ ವಿಶೇಷ ಗಮನ ಸೆಳೆದಿದೆ.

ಈ ಏಷ್ಯಾಕಪ್‌ನಲ್ಲಿ ಭಾರತ–ಪಾಕಿಸ್ತಾನ ನಡುವಿನ ಎರಡು ಮುಖಾಮುಖಿಗಳಲ್ಲೂ ಭಾರತ ಗೆಲುವು ಸಾಧಿಸಿತ್ತು. ಆದರೆ, ಗಾಯದ ಸಮಸ್ಯೆಯಿಂದಾಗಿ ಕೆಲವು ಬದಲಾವಣೆಗಳೊಂದಿಗೆ ಭಾರತ ಮೈದಾನಕ್ಕಿಳಿಯುವ ಸಾಧ್ಯತೆ ಇದೆ. ಪಾಕಿಸ್ತಾನ ತಂಡದಲ್ಲಿ ಬದಲಾವಣೆಗಳ ಸಾಧ್ಯತೆ ಕಡಿಮೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande