ಏಷ್ಯಾಕಪ್ ಫೈನಲ್: ಪಾಕಿಸ್ತಾನ 146 ರನ್‌ಗಳಿಗೆ ಆಲೌಟ್
ದುಬೈ, 28 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಏಷ್ಯಾಕಪ್ 2025ರ ಅಂತಿಮ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಗಿದೆ. ಪಾಕ್ ಪರ
ಏಷ್ಯಾಕಪ್ ಫೈನಲ್: ಪಾಕಿಸ್ತಾನ 146 ರನ್‌ಗಳಿಗೆ ಆಲೌಟ್


ದುಬೈ, 28 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಏಷ್ಯಾಕಪ್ 2025ರ ಅಂತಿಮ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಗಿದೆ. ಪಾಕ್ ಪರ ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ ಅತಿ ಹೆಚ್ಚು 57 ರನ್ ಗಳಿಸಿ ತಂಡವನ್ನು ಉತ್ತಮ‌ ಮೊತ್ತದತ್ತ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ, ಇತರ ಆಟಗಾರರು ಭಾರತೀಯ ಬೌಲಿಂಗ್ ದಾಳಿಗೆ ತತ್ತರಿಸಿದರು.

ಭಾರತ ಪರ ಸ್ಪಿನ್ನರ್ ಕುಲ್ದೀಪ್ ಯಾದವ್ ನಾಲ್ಕು ವಿಕೆಟ್ ಕಬಳಿಸಿದರು. ಜೊತೆಗೆ ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದು ಪಾಕಿಸ್ತಾನದ ರನ್ ಗಳಿಕೆಗೆ ಕಡಿವಾಣ ಹಾಕಿದರು.

ಇದೀಗ ಭಾರತಕ್ಕೆ ಏಷ್ಯಾಕಪ್ ಗೆಲ್ಲಲು 147 ರನ್ ಗುರಿ ನಿಗದಿಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande